ಆ.23ರ ವರೆಗೆ ತಾವರೆಕೆರೆ ಶಿಲಾಮಠದಲ್ಲಿ ಶಿವಪೂಜಾನುಷ್ಠಾನ ಕಾರ್ಯಕ್ರಮ

| Published : Jul 27 2025, 12:00 AM IST

ಆ.23ರ ವರೆಗೆ ತಾವರೆಕೆರೆ ಶಿಲಾಮಠದಲ್ಲಿ ಶಿವಪೂಜಾನುಷ್ಠಾನ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಗಿರಿ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ 25ನೇ ವರ್ಷದ ಶ್ರಾವಣ ಮಾಸದ ಶಿವ ಪೂಜಾನುಷ್ಠಾನ ಕಾರ್ಯಕ್ರಮ ಜು.24ರಿಂದ ಆ.23ರವರೆಗೆ ತಿಂಗಳ ಕಾಲ ನಡೆಯಲಿದೆ ಎಂದು ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

- ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರಿಂದ ಮಾಹಿತಿ

- - -

ಚನ್ನಗಿರಿ: ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ 25ನೇ ವರ್ಷದ ಶ್ರಾವಣ ಮಾಸದ ಶಿವ ಪೂಜಾನುಷ್ಠಾನ ಕಾರ್ಯಕ್ರಮ ಜು.24ರಿಂದ ಆ.23ರವರೆಗೆ ತಿಂಗಳ ಕಾಲ ನಡೆಯಲಿದೆ ಎಂದು ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಜು.24ರಂದು ಬಾಳೆಹೊನ್ನುರು ರಂಭಾಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬೆಳಗ್ಗೆ 6.30 ಗಂಟೆಗೆ ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ 54ನೇ ವರ್ಷದ ಪುಣ್ಯಸಂಸ್ಮರಣೆ, ಲಿಂ. ಚಂದ್ರಶೇಖರ ಶಿವಾಚಾರ್ಯರ 72ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮಗಳು ನಡೆಯಲಿವೆ. ದಿವ್ಯ ಸಾನ್ನಿಧ್ಯವನ್ನು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾಶಿವಾಚಾರ್ಯ ಮಹಾಸ್ವಾಮೀಜಿ ವಹಿಸುವರು.

ಬೆಳಗ್ಗೆ 7 ಗಂಟೆಗೆ ಶ್ರೀ ಉಮಾಮಹೇಶ್ವರ ಸ್ವಾಮೀಜಿ, ಶ್ರೀ ಜಗದ್ಗುರು ರೇಣುಕಾಚಾರ್ಯರು, ಶ್ರೀ ವೀರಭದ್ರಸ್ವಾಮಿ, ಆದಿಶಕ್ತಿ ಶ್ರೀ ಚೌಡೇಶ್ವರಿ ದೇವಿಗೆ ಮಹಾರುದ್ರಾಭಿಷೇಕ, ಅಷ್ಟೋತ್ತರದ ನಂತರ ಮಹಾ ಮಂಗಳಾರತಿ ನಡೆಯಲಿದೆ. 7.30ಕ್ಕೆ ಇಷ್ಟಲಿಂಗ ಪೂಜಾ ಕಾರ್ಯಕ್ರಮ. ಬೆಳಗ್ಗೆ 11 ಗಂಟೆಗೆ ಪುಣ್ಯ ಸ್ಮರಣೋತ್ಸವ ನಡೆಯಲಿದೆ. ದಿವ್ಯ ಸಾನ್ನಿಧ್ಯವನ್ನು ಬಾಳೆಹೊನ್ನೂರು ಪೀಠದ ರಂಭಾಪುರಿ ಜಗದ್ಗುರು ವಹಿಸಲಿದ್ದಾರೆ.

ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಶಿಲಾಮಠದ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ನಾಡಿನ ವಿವಿಧ ಭಾಗಗಳಿಂದ 16 ಶ್ರೀಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಸಮಾರಂಭ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ತಹಸೀಲ್ದಾರ್ ಎನ್.ಜೆ. ನಾಗರಾಜ್, ತಾಪಂ ಇಒ ಬಿ.ಕೆ.ಉತ್ತಮ, ಆರಕ್ಷಕ ವೃತ್ತ ನಿರೀಕ್ಷಕ ರವೀಶ್, ಗ್ರಾಪಂ ಅಧ್ಯಕ್ಷೆ ಮಂಜುಳಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

- - -

(ಸಾಂದರ್ಭಿಕ ಚಿತ್ರ)