ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ

| Published : Mar 09 2024, 01:34 AM IST

ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿವಾರಾಧನೆಗೆ ವಿಶೇಷ ಮಹತ್ವವಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ನಗರದ ಶ್ರೀ ಮಂಜುನಾಥ ಸೇವಾ ಸಮಿತಿಯಿಂದ 28ನೇ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವರಾತ್ರಿ ದಿನ ಶಿವನನ್ನು ಆರಾಧಿಸಿ, ಉಪವಾಸ, ಜಾಗರಣೆ ಮಾಡಿ ಶಿವಪೂಜೆ ಮಾಡುವುದು ಪದ್ಧತಿ. ಮಂಜುನಾಥ ಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮಾಡಿ, ಪ್ರಥಮ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದರು.

ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಳೆರಾಯ ಕೃಪೆತೋರಿ ಆದಷ್ಟು ಬೇಗ ಮಳೆ ಬಂದು ನಾಡು ಸಮೃದ್ಧವಾಗಿರಲಿ ಎಂದು ಶಿವನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಬ್ರಹ್ಮರಥೋತ್ಸವದ ವೇಳೆ ವೀರಗಾಸೆ, ಡೊಳ್ಳುಕುಣಿತ, ನಾದಸ್ವರ, ಗೊಂಬೆ ಕುಣಿತ, ಚಂಡೆವಾದ್ಯ, ತಮಟೆ ವಾದ್ಯ, ಕೀಲುಕುದುರೆ, ಮರಗಾಲು ಕುಣಿತ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿತು.

ನಗರಸಭೆ ಮಾಜಿ ಸದಸ್ಯ ಅನಂತರಮಯ್ಯ, ಪುರಸಭೆ ಮಾಜಿ ಅಧ್ಯಕ್ಷ ಪಿಳ್ಳಣ್ಣ, ಬಿಬಿಎಂಪಿ ಮಾಜಿ ಸದಸ್ಯ ನಿತೀಶ್ ಪುರುಷೋತ್ತಮ್, ತಾ.ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಮುಖಂಡರಾದ ರೇವಣ್ಣ, ಶಾಂತಮ್ಮ ಇತರರಿದ್ದರು.ಫೋಟೋ: 8 ಹೆಚ್‌ಎಸ್‌ಕೆ 2

ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಚಾಲನೆ ನೀಡಿದರು.