ಸಾರಾಂಶ
ಭದ್ರಾವತಿ: ಹಿಂದೂ ಸಾಮ್ರಾಜ್ಯ ನಿರ್ಮಾಣದಲ್ಲಿ ಶಿವಾಜಿ ಮಹಾರಾಜರ ಕೊಡುಗೆ ಹೆಚ್ಚಿನದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರು ದೇಶದ ಇತಿಹಾಸದ ಪುಟದಲ್ಲಿ ಇಂದಿಗೂ ಅಪ್ರತಿಮ ನಾಯಕರಾಗಿ ಉಳಿದುಕೊಂಡಿದ್ದಾರೆ. ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ನಗರದ ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖ, ಹಿರಿಯ ಮಾರ್ಗದರ್ಶಕ ಮಧುಕರ್ ಕಾನಿಟ್ಕರ್ ಹೇಳಿದರು.
ಭದ್ರಾವತಿ: ಹಿಂದೂ ಸಾಮ್ರಾಜ್ಯ ನಿರ್ಮಾಣದಲ್ಲಿ ಶಿವಾಜಿ ಮಹಾರಾಜರ ಕೊಡುಗೆ ಹೆಚ್ಚಿನದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರು ದೇಶದ ಇತಿಹಾಸದ ಪುಟದಲ್ಲಿ ಇಂದಿಗೂ ಅಪ್ರತಿಮ ನಾಯಕರಾಗಿ ಉಳಿದುಕೊಂಡಿದ್ದಾರೆ. ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ನಗರದ ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖ, ಹಿರಿಯ ಮಾರ್ಗದರ್ಶಕ ಮಧುಕರ್ ಕಾನಿಟ್ಕರ್ ಹೇಳಿದರು.
ಶನಿವಾರ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವತಿಯಿಂದ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೫ನೇ ಜಯಂತ್ಯುತ್ಸವದಲ್ಲಿ ಉಪನ್ಯಾಸ ನೀಡಿದರು. ಶಿವಾಜಿ ಮಹಾರಾಜರು ಒಬ್ಬ ನ್ಯಾಯಶೀಲ, ವಿಚಾರಶೀಲ, ಸಂಯಮಶೀಲ, ಗುಣಶೀಲ ಹಾಗೂ ಅಪ್ರತಿಮ ಶೂರತ್ವದ ಶ್ರೀಮಂತ ವ್ಯಕ್ತಿತ್ವದ ಮಹಾರಾಜರಾಗಿದ್ದು, ಅವರ ಜೀವನ ಚರಿತ್ರೆ ಗಮನಿಸಿದಾಗ ಹಿಂದೂ ಸಾಮ್ರಾಜ್ಯ ನಿರ್ಮಾಣದಲ್ಲಿ ಅವರು ನೀಡಿರುವ ಕೊಡುಗೆ ಅನನ್ಯವಾಗಿರುವುದು ತಿಳಿದುಬರುತ್ತದೆ. ಹಿಂದೂ ಧರ್ಮದ ವಿರುದ್ಧ ಮುಸ್ಲಿಂ ಧರ್ಮದವರು ನಡೆಸಿದ ದಾಳಿ ಸಮರ್ಥವಾಗಿ ಎದುರಿಸುವ ಮೂಲಕ ಧರ್ಮ ರಕ್ಷಕರಾಗಿರುವುದು ಇತಿಹಾಸದ ಪುಟಗಳಿಂದ ತಿಳಿದು ಬರುತ್ತದೆ. ಇಂತಹ ಮಹಾರಾಜರ ಆದರ್ಶತನ, ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಎಚ್.ಆರ್.ಲೋಕೇಶ್ವರರಾವ್ ದೊಂಬಾಳೆ ಮಾತನಾಡಿ, ಕ್ಷೇತ್ರದಲ್ಲಿ ಮರಾಠ ಸಮುದಾಯದವರು ಅಲ್ಪ ಪ್ರಮಾಣದಲ್ಲಿ ಇದ್ದರೂ ಪ್ರಸ್ತುತ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಸಮುದಾಯದ ಎಲ್ಲರೂ ಸಂಘಟಿತರಾಗಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಿಕೊಂಡು ಬರುತ್ತಿರುವುದು ಸಂಘಟನೆಗೆ ಮತ್ತಷ್ಟು ಸ್ಫೂರ್ತಿ ನೀಡುತ್ತಿದೆ ಎಂದರು.ಬೆಂಗಳೂರು, ಶ್ರೀ ಭವಾನಿ ದತ್ತಪೀಠ ಗವಿಪುರಂ, ಶ್ರೀ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಉಪಾಧ್ಯಕ್ಷ ಶಿವಾಜಿರಾವ್ ಗಾಯ್ಕವಾಡ್, ಉದ್ಯಮಿ ಬಿ.ಕೆ.ಜಗನ್ನಾಥ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಸದಸ್ಯೆ ಅನುಪಮ ಚನ್ನೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್, ಉಪಾಧ್ಯಕ್ಷೆ ಮೀರಾಬಾಯಿ ಬಿಸೆ, ಉದ್ಯಮಿ ಡಾ.ನಾಗೇಶ್‌ರಾವ್ ಬಾಂಡಲ್ಕರ್, ಯಶವಂತರಾವ್ ಘೋರ್ಪಡೆ, ರಘುನಾಥರಾವ್ ಗಿಡ್ಡೆ, ಸಂಘದ ಪದಾಧಿಕಾರಿಗಳಾದ ಎಚ್.ಎಲ್.ರಂಗನಾಥರಾವ್ ಚೌವ್ಹಾಣ್, ಇ ಸುನಿಲ್ ಗಾರ್ಗೆ, ರಂಗನಾಥರಾವ್ ಎಚ್.ಪಿಂಗ್ಳೇನರ್ ಮತ್ತಿತರರಿದ್ದರು.ಕಾರ್ಯಕ್ರಮಕ್ಕೂ ಮೊದಲು ನಗರದ ಸಿ.ಎನ್.ರಸ್ತೆ, ಭವಾನಿ ಕಾಂಪ್ಲೆಕ್ಸ್‌ನಿಂದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದ ವರೆಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.