ಸಿದ್ಧಗಂಗಾಮಠದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿಗಳ ಕಾಳಜಿಯಿಂದಾಗಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಅಘಾದವಾದ ಸಾಧನೆ ಮಾಡಿದೆ ಎಂದು ಡಿಡಿಪಿಐ ರಘು ಚಂದ್ರ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಸಿದ್ಧಗಂಗಾಮಠದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿಗಳ ಕಾಳಜಿಯಿಂದಾಗಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಅಘಾದವಾದ ಸಾಧನೆ ಮಾಡಿದೆ ಎಂದು ಡಿಡಿಪಿಐ ರಘು ಚಂದ್ರ ಅವರು ತಿಳಿಸಿದರು. ಗುಬ್ಬಿ ತಾಲೂಕಿನ ನಿಟ್ಟೂರಿನ ಬಾಗುರು ಗೇಟಿನ ಗುರುಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 19ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿದಾಗ ಅವರ ಬದುಕಿನಲ್ಲಿ ಆಶಾಕಿರಣವಾಗುತ್ತದೆ ಮತ್ತು ಬದುಕು ಬಂಗಾರವಾಗುತ್ತದೆ ಎಂದು ತಿಳಿಸಿದರು. ಬೆಟ್ಟದಹಳ್ಳಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ನಟರಾಜು ಮಾತನಾಡಿದರು. ಮಲ್ಲಿಕಾರ್ಜುನ ಸಂಸ್ಥೆಯ ಕಾರ್ಯದರ್ಶಿ ನಿರಂಜನ ಮೂರ್ತಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್, ಶಾಲೆಯ ಆಡಳಿತಾಧಿಕಾರಿ ಸುರೇಶ್, ಡಯಟ್ ಪ್ರಾಂಶುಪಾಲ ರಂಗರಾಜು, ಲೋಕೇಶ್ ಜಲಜಾಕ್ಷಿ ಶಿವಕುಮಾರ್ ಸೇರಿದಂತೆ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.