ಸಾರಾಂಶ
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಸಿದ್ದಗಂಗಾ ಶ್ರೀಗಳ 5ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಪುಷ್ಪನಮನ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಭಾಲ್ಕಿ
ತ್ರಿವಿಧ ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಬಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಗಳ 5ನೆಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಶಿವಕುಮಾರ ಸ್ವಾಮೀಜಿ ಇಡೀ ಜೀವತಾವಧಿಯನ್ನು ಸಮಾಜಕ್ಕೆ ಮೀಸಲಿಟ್ಟರು. ಶ್ರೀಗಳು ಜಾತಿ, ಧರ್ಮ ಬೇಧ ಮರೆತು ಸಮಾಜದ ಎಲ್ಲರಿಗೂ ವಿದ್ಯೆ ನೀಡಿದರು. ಅನ್ನ, ವಸತಿ, ಶಿಕ್ಷಣಕ್ಕೆ ಒತ್ತು ಕೊಟ್ಟು ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದರು ಎಂದು ಸ್ಮರಿಸಿದರು.
ಮಹಾರಾಷ್ಟ್ರ ರಾಜ್ಯದ ಜೀಜಾವೂ ಬ್ರಿಗೇಡ್ ರಾಷ್ಟ್ರೀಯ ಅಧ್ಯಕ್ಷೆ ನಿರ್ಮಲಾತಾಯಿ ಪಾಟೀಲ್ ಮಾತನಾಡಿ, ಶಿವಕುಮಾರ ಸ್ವಾಮೀಜಿ ಹಸಿದು ಬಂದ ಅತಿಥಿಗಳಿಗೆ ದಾಸೋಹ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿ. ನಡೆದಾಡುವ ದೇವರು, ಅಭಿನವ ಬಸವಣ್ಣ, ತ್ರಿವಿಧ ದಾಸೋಹಿ ಎಂದೇ ಹೆಸರಾಗಿದ್ದ ಅವರು 111 ವರ್ಷಗಳ ತುಂಬು ಜೀವನ ನಡೆಸಿದ್ದರು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಾಹಿತಿ ರಾಜು ಜುಬರೆ, ಗುರುಪ್ರಸಾದ ಶಾಲೆಯ ಮುಖ್ಯಗುರು ಬಾಬು ಬೆಲ್ದಾಳ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.ಚಿತ್ರ 21ಬಿಡಿಆರ್54
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಲಿಂ. ಶಿವಕುಮಾರ ಸ್ವಾಮೀಗಳ 5ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭಾಗವಹಿಸಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.