ಸಾರಾಂಶ
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಶುರುವಾಗಿದ್ದ ತಿಕ್ಕಾಟದಲ್ಲಿ ಡಿಕೆಶಿಗೆ ಗೆಲುವು ಸಿಕ್ಕಿದೆ.
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಬೆಂಗಳೂರು ಬ್ರ್ಯಾಂಡ್ ಜೊತೆಯಲ್ಲಿ ಬೆರೆಸಬೇಕು ಎಂಬ ಡಿ.ಕೆ. ಶಿವಕುಮಾರ್ ಕನಸು ಮತ್ತು ಪ್ಲಾನ್ ಇದೀಗ ಯಶಸ್ವಿಯಾಗಿದೆ. ಆದರೆ, ವಿರೋಧ ಪಕ್ಷಗಳಾಗಿರುವ ಜೆಡಿಎಸ್ ಮತ್ತು ಬಿಜೆಪಿ ಹೆಸರು ಬದಲಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ.ಸಿಲಿಕಾನ್ ಸಿಟಿ ಬೆಂಗಳೂರು ಅತಿ ವೇಗದಿಂದ ಬೆಳೆಯುತ್ತಿದ್ದು, ಪಕ್ಕದಲ್ಲಿಯೇ ಇರುವ ರಾಮನಗರ ಜಿಲ್ಲೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿದ್ದಾಗ ರಾಮನಗರ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಹಾಗೂ ಕನಕಪುರ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಬೆಳೆದವರು.
ರಾಮನಗರ ಜಿಲ್ಲೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ಎಚ್.ಡಿ.ಕುಮಾರಸ್ವಾಮಿ, ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರದಲ್ಲಿ ಭಾರಿ ವಿರೋಧ ಮಾಡಿದ್ದರು. ಅಲ್ಲದೆ, ಇದು ರಾಜಕೀಯ ಅಸ್ತ್ರವಾಗಿಯೂ ಬಳಸಿಕೊಂಡಿದ್ದರು. 2024ರಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆಯಾದಾಗ ಕುಮಾರಸ್ವಾಮಿರವರು ತಮ್ಮ ಪ್ರಭಾವ ಬಳಸಿ ನಿರಾಕರಣೆಯಾಗುವಂತೆ ಮಾಡಿದ್ದರು ಎನ್ನಲಾಗಿದೆ.ಇದನ್ನು ಸವಾಲಾಗಿ ತೆಗೆದುಕೊಂಡ ಡಿ.ಕೆ.ಶಿವಕುಮಾರ್, ಕೊನೆಗೂ ಸಚಿವ ಸಂಪುಟದಲ್ಲಿ 2ನೇ ಬಾರಿಗೆ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿ ಕುಮಾರಸ್ವಾಮಿ ವಿರುದ್ಧ ದೊಡ್ಡ ಗೆಲುವು ಕಂಡಿದ್ದಾರೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕಾರಣವಾಗಿದೆ.
ಈಗ ರಾಮನಗರ ಜಿಲ್ಲೆ ಹೆಸರನ್ನ ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ನೀಡಲಾಗಿದೆ. ಈ ಮೂಲಕ ಹಿಂದೆ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿ ಸೇರಿ ಪ್ರತ್ಯೇಕ ಜಿಲ್ಲೆಯಾಗಿದ್ದ ರಾಮನಗರಕ್ಕೆ ಇದೀಗ ಬೆಂಗಳೂರಿನ ಹೆಸರು ಸಿಗುತ್ತಿದೆ.ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು, ಇದೇ ವಿಚಾರ ಕೇಂದ್ರ ಸರ್ಕಾರದ ತನಕ ಹೋಗಿತ್ತು. ಇದೀಗ ಅಂತಿಮವಾಗಿ ಈ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರು ಗೆದ್ದು ಬೀಗಿದ್ದಾರೆ.ಬಾಕ್ಸ್..............
ಟ್ವೀಟ್ ನಲ್ಲಿ ಸಂಭ್ರಮ ಹಂಚಿಕೊಂಡ ಡಿಕೆಶಿರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿರುವ ವಿಚಾರವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟ್ವೀಟ್ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.
''''''''ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.''''''''ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.22ಕೆಆರ್ ಎಂಎನ್ 11.ಜೆಪಿಜಿ
ಡಿ.ಕೆ.ಶಿವಕುಮಾರ್ ಟ್ವೀಟ್ ನಲ್ಲಿ ಸಂಭ್ರಮ ಹಂಚಿಕೊಂಡಿರುವುದು.---------------------------