ಸಂವಿಧಾನ ಬದಲಿಸುವ ಡಿಕೆಶಿ ಹೇಳಿಕೆ ದುರಾದೃಷ್ಟಕರ : ಮಾಜಿ ಸಚಿವ ವಿ. ಸುನಿಲ್‌ಕುಮಾರ್‌

| N/A | Published : Mar 25 2025, 12:50 AM IST / Updated: Mar 25 2025, 12:11 PM IST

Sunil kumar

ಸಾರಾಂಶ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿ ಸಮರ್ಥಿಸಿಕೊಳ್ಳುವುದಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

 ಕಾರ್ಕಳ : ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿ ಸಮರ್ಥಿಸಿಕೊಳ್ಳುವುದಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸಂವಿಧಾನ ಬದಲಾಯಿಸಲು ಹೊರಟರೆ ರಕ್ತಪಾತವಾಗುತ್ತದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈಗ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಕ್ಕೆ ಶಾಶ್ವತ ಅನ್ಯಾಯ ಮಾಡುವ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದುಳಿದ ವರ್ಗಕ್ಕೆ ನ್ಯಾಯಬದ್ಧವಾಗಿ ಸಿಗಬೇಕಿದ್ದ ಮೀಸಲನ್ನು ಮುಸ್ಲಿಂರಿಗೆ ವರ್ಗಾಯಿಸುತ್ತಿರುವ ನಿಮ್ಮ ಮತ ಬ್ಯಾಂಕ್ ರಾಜಕಾರಣದ ವಿರುದ್ಧ ಬಿಜೆಪಿ ಹೋರಾಟ ರೂಪಿಸುತ್ತದೆ. ಕಾಂಗ್ರೆಸ್ ಎಂದರೆ ಓಬಿಸಿ- ದಲಿತ ವಿರೋಧಿ, ಕಾಂಗ್ರೆಸ್ ಹಿಂದು ವಿರೋಧಿ, ಕಾಂಗ್ರೆಸ್ ಎಂದರೆ ಸಂವಿಧಾನ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.