ಆಡಳಿತರೂಢ ಪಕ್ಷದ ಸದಸ್ಯರಿಂದಲೇ ಪ್ರತಿಭಟನೆಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.