ಟೀಕೆ, ಗದ್ದಲಗಳ ನಡುವೆ ಸಂಪನ್ನಗೊಂಡ ಯುವ ಸಂಸತ್ಸಂಸದೀಯ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನರಚನೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಅಣುಕು ಸಂಸತ್ ಸ್ಪರ್ಧೆ ಆಡಳಿತ ಮತ್ತು ವಿರೋಧ ಪಕ್ಷಗಳ ಪರಸ್ಪರ ಆರೋಪ, ಪ್ರತ್ಯಾರೋಪ, ಕೆಸರೆರೆಚುವಿಕೆ, ಟೀಕೆ ಮತ್ತು ಗದ್ದಲಗಳ ನಡುವೆ ಸಂಪನ್ನಗೊಂಡಿತು.