ಜನಿವಾರ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಶಿವಮೊಗ್ಗ: ಶಿವಮೊಗ್ಗ, ಬೀದರ್ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಸೋಮವಾರ ಜಿಲ್ಲಾ ಬ್ರಾಹ್ಮಣ ಮಹಾಸಭಾ, ವಿವಿಧ ವಿಪ್ರ ಸಂಘಟನೆಗಳು, ವಿಪ್ರ ವಕೀಲರ ವೇದಿಕೆಗಳ ಸಹಯೋಗದಲ್ಲಿ ತಿಲಕನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.