ಬೀದರ್ ಹಾಗೂ ಶಿವಮೊಗ್ಗದಲ್ಲಿ ಜನಿವಾರ ಧಾರಿ ವಿದ್ಯಾರ್ಥಿಗಳಿಗೆ ಸಿಇಟಿ ಬರೆಯಲು ಅಡ್ಡಿ ಮಾಡಿದ ಪ್ರಸಂಗಗಳು ನಡೆದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರ ಠಾಣೆಗೆ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.