ಕಸಾಪ ರಾಜ್ಯಾಧ್ಯಕ್ಷರ ಅಮಾನತಿಗೆ ಆಗ್ರಹಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಡಿ.ಮಂಜುನಾಥ್ ಅವರ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಲು ಮುಂದಾಗಿರುವ ಕ್ರಮ ಖಂಡಿಸಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಅಮಾನತ್ತು ಮಾಡಿ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಿತೈಷಿಗಳು, ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.