ಮಲೆನಾಡಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಖರೀದಿ ಭರಾಟೆ ಜೋರಾಗಿ ಸಾಗಿದೆ. ಹಬ್ಬದ ಹಿನ್ನೆಲೆ ಬುಧವಾರ ಗಾಂಧಿ ಬಜಾರ್‌ನಲ್ಲಿ ಜನಜಂಗುಳಿ ಕಂಡುಬಂತು. ಮಹಿಳೆಯರು ಆಕಾಶಬುಟ್ಟಿ, ದೀಪ ಖರೀದಿಯಲ್ಲಿ ಬಿಜಿಯಾಗಿದ್ದರು. ವಿವಿಧ ರೀತಿಯ ಹಣತೆಗಳು, ಲೈಟ್‌ಗಳು, ಆಕಾಶಬುಟ್ಟಿ, ಪ್ಲಾಸ್ಟಿಕ್ ಹೂವುಗಳ ಮಾರಾಟ ಜೋರಾಗಿತ್ತು.