ರಂಗಾಯಣ: 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಮರ್ಶಿಸುವ ದಿಸೆಯಲ್ಲಿ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕದ ಬಗ್ಗೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ತಿಳಿಸಿದರು.