ಗ್ಯಾರಂಟಿ ಯೋಜನೆಗಳು ಸರ್ವರ ಪ್ರಗತಿಗೆ ಸಹಕಾರಿಶಿವಮೊಗ್ಗ: ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.