ಶ್ರೀ ಅಂಗಾಳ ಪರಮೇಶ್ವರಿ, ಮುನೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ಹಾಗೂ ಮುನೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು. ಬೆಳಗಿನ ಜಾವ ವಿವಿಧ ಹೋಮ ನಡೆಸಲಾಗಿದ್ದು, ನಂತರ ಮಲ್ಲೇಶ್ವರ ಸಭಾಭವನ ಪಕ್ಕದ ಶ್ರೀ ಈಶ್ವರ ದೇವಾಲಯದಿಂದ ಅಮ್ಮನವರ ಹಾಗೂ ಮುನೇಶ್ವರ ಸ್ವಾಮಿಯವರ ಗಂಗೆ ಪೂಜೆಗೆ 101 ಗಂಗೆ ತುಂಬಿದ ಕಲಶಗಳನ್ನು ಹೊತ್ತು ತಂದು ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ನಂತರ ಅಭಿಷೇಕ ನಡೆಸಲಾಯಿತು. ನಂತರ ದೇವಾಲಯ ಉದ್ಘಾಟಿಸಿ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.