ಬಹುಸಂಸ್ಕೃತಿಯ ನಾಡಲ್ಲಿ ಹಿಂದಿ ಹೇರಿಕೆ ಸಲ್ಲದುರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ, ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಜಾನಪದ ಪರಿಷತ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು.