ಸಮಸ್ಯೆಗಳ ಬಗೆಹರಿಸಿ, ಇಲ್ಲ ಪ್ರತ್ಯೇಕ ರಾಜ್ಯ ಕೊಡಿರೈತರು, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಿ. ಇಲ್ಲವಾದರೆ ಮಲೆನಾಡು, ಕರಾವಳಿ ಸೇರಿ ರಾಜ್ಯದ 12 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ. ಶ್ರೀನಿವಾಸ್ ತಿಳಿಸಿದರು.