ದೇವಾಲಯಗಳ ಹಣ ದುರ್ಬಳಕೆಗೆ ಖಂಡನೆಶಿಕಾರಿಪುರ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ದೇವಸ್ಥಾನಗಳಿಗೆ ಸಂಬಂಧಿಸಿದ ಕೋಟ್ಯಂತರ ಹಣವನ್ನು ಭ್ರಷ್ಟಾಚಾರ ಮಾಡಿರುವುದನ್ನು ಖಂಡಿಸಿ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ಮಂದಿರ ಮಹಾಸಂಘ, ವಿವಿಧ ಹಿಂದೂ ಪರ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಧಾರ್ಮಿಕ ದತ್ತಿ ಇಲಾಖೆಯ ಸಚಿವರಿಗೆ ಇಲ್ಲಿನ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.