ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳಭದ್ರಾವತಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ.