ಅಧಿಕೃತ, ಅನಧಿಕೃತ ಆಸ್ತಿಗಳಿಗೆ ಇ-ಖಾತಾ ಅಭಿಯಾನಭದ್ರಾವತಿ: ಸರ್ಕಾರ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಅನಧಿಕೃತ ಆಸ್ತಿಗಳಿಗೆ ಖಾತಾ ನೀಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇ-ಖಾತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಅಧಿಕೃತ ಮತ್ತು ಅನಧಿಕೃತ ಆಸ್ತಿಗಳಿಗೆ ತಂತ್ರಾಂಶದಲ್ಲಿ ಇ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜ್‌ಕುಮಾರ್ ಮನವಿ ಮಾಡಿದರು.