ಮಾತುಕತೆಗೆ ಮುಂದಾಗದಿದ್ದರೆ ರೈತ ಚಳವಳಿ ತೀವ್ರ: ರಾಜ್ಯ ರೈತ ಸಂಘದ ಎಚ್. ಆರ್. ಬಸವರಾಜಪ್ಪಚಳವಳಿ ನಿರತ ರೈತ ಮುಖಂಡರ ಜತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುವ ಮೂಲಕ ರೈತರ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಚಳವಳಿ ತಿವ್ರಗೊಳಿಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಎಚ್ಚರಿಸಿದರು. ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ವೇಳೆ ಮಾತನಾಡಿದರು.