ಅತಿವೃಷ್ಟಿ ಹಾನಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ: ಶಾಸಕ ಗೋಪಾಲಕೃಷ್ಣ ಬೇಳೂರುಅತಿವೃಷ್ಟಿಯಿಂದ ಹಾನಿಯಾಗಿರುವ ಕುರಿತು ಸದಸನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನವನ್ನು ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಮತ್ತು ಸೊರಬ ಕ್ಷೇತ್ರಕ್ಕೆ ನೀಡಲು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡುತ್ತೇನೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.