ಓಟೂರಲ್ಲಿ ವಿಜೃಂಭಣೆಯಿಂದ ಜರುಗಿದ ಹೋರಿ ಹಬ್ಬಸೊರಬ: ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರೀಯರ ಹರ್ಷೋದ್ಗಾರದ ನಡುವೆ ತಾಲೂಕಿನ ಓಟೂರು ಗ್ರಾಮದಲ್ಲಿ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಊರ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ವಿಜೃಂಭಣೆಯಿಂದ ನಡೆಯಿತು.