ಅಭಿಪ್ರಾಯ ಭೇದ ಮರೆತು ಸದೃಢ ಸಹಕಾರ ಕ್ಷೇತ್ರ ಕಟ್ಟೋಣಹೊಸನಗರ: ದೇಶದಲ್ಲಿ ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರೂ ಅವುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿ ರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದು, ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಹೇಳಿದರು.