ವಕ್ಫ್ ಕಾಯ್ದೆ ವಿರೋಧಿಸಿ ತಾಲೂಕು ಕಚೇರಿ ಮುತ್ತಿಗೆಗೆ ಯತ್ನರಾಜ್ಯದಲ್ಲಿ ವಕ್ಫ್ ಕಾಯ್ದೆ ದುರ್ಬಳಕೆ ಹಿನ್ನಲೆ ರೈತರು, ಮಠಮಾನ್ಯಗಳು, ಹಿಂದೂ ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈ ಕುರಿತು ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವುದು ಖಂಡನೀಯ ಎಂದು ಆಕ್ರೋಶಪಡಿಸಿ ಸೋಮವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.