ನೋಟಿಸ್ಗೆ ಯಾರೂ ಭಯಪಡಬೇಕಾದ ಅಗತ್ಯವಿಲ್ಲಭದ್ರಾವತಿ: ರಾಜ್ಯ ಸರ್ಕಾರ ಎಂದಿಗೂ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಪ್ರಸ್ತುತ ಬಗರ್ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.