ಶಿಕಾರಿಪುರದಲ್ಲಿ 3750 ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಂದಾಜು 19500 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 10500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಜುಲೈ ತಿಂಗಳು ಸುರಿದ ಸತತ ಮಳೆಯಿಂದಾಗಿ ಅಂದಾಜು 3750 ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಹರ್ತಿ ತಿಳಿಸಿದ್ದಾರೆ.