ಹಿಂದುಳಿದ ವರ್ಗಗಳ ಸಮೀಕ್ಷೆಗೆ ಸಹಕರಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆ.23ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಿದ್ದು, ಮೊದಲ ಹಂತದಲ್ಲಿ ವಿದ್ಯುತ್ ಮೀಟರ್ ರೀಡರ್‌ಗಳು, ಪ್ರತಿ ಮನೆಗಳಿಗೆ ಭೇಟಿ ನೀಡಿ ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದೆ. ಜಿಲ್ಲೆಯ ಎಲ್ಲ ಜನತೆ ಸಮೀಕ್ಷೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.