ಮಲೆನಾಡು ಪ್ರಗತಿಗೆ ಬಜೆಟ್‌ನಲ್ಲಿ ಹಣ ನೀಡಿ ಮಲೆನಾಡಿನ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಅರಣ್ಯ ಕ್ಷೇತ್ರಗಳಲ್ಲಿ ಜೀವ ವೈವಿಧ್ಯತೆ ಕಾಪಾಡಲು ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾ ಜಾರಿ ಮಾಡಬೇಕು. ಈ ಸುಸ್ಥಿರ ಅಭಿವೃದ್ಧಿ ಅಜೆಂಡಾ ಜಾರಿಗೆ ರಾಜ್ಯ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ನಿಯೋಗ ಒತ್ತಾಯಿಸಿದೆ.