ಸೆ.1ರಿಂದ ಪ್ರೀಪೇಯ್ಡ್ ಆಟೋ ಕೌಂಟರ್ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆ.1ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ ಪ್ರೀಪೇಯ್ಡ್ ಆಟೋ ಕೌಂಟರ್‌ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.