ತೀವ್ರ ಬರ: ಬೇಸಿಗೆ ಹಂಗಾಮಿನ ಬಿತ್ತನೆ ಕುಂಠಿತಈ ಬಾರಿ ಬೇಸಿಗೆ ಹಂಗಾಮಿನಲ್ಲಿ 20,568 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹಾಕಿಕೊಂಡಿದ್ದು, ಕೇವಲ 8475 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಮಳೆಯಿಲ್ಲದೆ ಮುಂಗಾರು, ಬೇಸಿಗೆ ಹಂಗಾಮಿನಲ್ಲೂ ಬಿತ್ತನೆ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಬೇಸಿಗೆಯ ದಿನಗಳಲ್ಲಿ ಜಿಲ್ಲೆಯಲ್ಲಿ 12,220 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದ ಭತ್ತ ಬೆಳೆ ಈಗ 4896 ಹೆಕ್ಟೇರ್‌ಗೆ ಕುಸಿದಿದೆ.