ಮಾಜಿ ಸಿಎಂ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿಶಿವಮೊಗ್ಗ: ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಯೋಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ, ದಿಟ್ಟ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರತಿಮೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಆಗ್ರಹಿಸಿದರು.