ಶಿವಾಜಿ ಜೀವನ ಚರಿತ್ರೆ ಎಲ್ಲರಿಗೂ ಆದರ್ಶಭದ್ರಾವತಿ: ಹಿಂದೂ ಸಾಮ್ರಾಜ್ಯ ನಿರ್ಮಾಣದಲ್ಲಿ ಶಿವಾಜಿ ಮಹಾರಾಜರ ಕೊಡುಗೆ ಹೆಚ್ಚಿನದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರು ದೇಶದ ಇತಿಹಾಸದ ಪುಟದಲ್ಲಿ ಇಂದಿಗೂ ಅಪ್ರತಿಮ ನಾಯಕರಾಗಿ ಉಳಿದುಕೊಂಡಿದ್ದಾರೆ. ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ನಗರದ ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖ, ಹಿರಿಯ ಮಾರ್ಗದರ್ಶಕ ಮಧುಕರ್ ಕಾನಿಟ್ಕರ್ ಹೇಳಿದರು.