ನಾಳೆ ಬಿಜೆಪಿ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಎಸ್.ಎನ್.ಚನ್ನಬಸಪ್ಪಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ. ಜನ ಸಂಘದಿಂದ ಹಿಡಿದು 1980ರಿಂದ ಭಾರತೀಯ ಜನತಾ ಪಕ್ಷವಾಗಿ ರೂಪುಗೊಂಡಿದ್ದು, ಜನಸಂಘದಿಂದಲೂ ಹಿಂದುಗಳ ಹಿತರಕ್ಷಣೆಗಾಗಿ ಹಾಗೂ ಉಳಿವಿಗಾಗಿ ಮತ ನೀಡಲು ಮತಯಾಚಿಸುತ್ತ ಬಂದಿದ್ದು, ಈಗಲೂ ಹಿಂದುತ್ವದ ಮೇಲೆ ಮತಯಾಚಿಸುತ್ತಿದೆ. ಶಿವಮೊಗ್ಗ ಜಿಲ್ಲೆ ಸಮಾಜವಾದಿ ನೆಲೆಗಟ್ಟಾಗಿದ್ದು, ಪಕ್ಷ ನಿರಂತರವಾಗಿ ವೈಚಾರಿಕತೆ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತ ಜನರ ಜೊತೆಗಿದೆ.