ದುರ್ಗಾಂಬಿಕಾ ಜಾತ್ರೆ: ಬಯಲು ಜಂಗೀ ಕುಸ್ತಿಗೆ ಚಾಲನೆಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ನಿಮಿತ್ತ ನಗರದ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಯಲು ಜಂಗಿ ಕುಸ್ತಿ ಪಂದ್ಯಾವಳಿಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲ ದಿನ ರಾಜ್ಯದ ಬಳ್ಳಾರಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಅನೇಕ ಜಿಲ್ಲೆಯ ಮತ್ತು ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಕುಸ್ತಿ ಜಟ್ಟಿಗಳು ಪಾಲ್ಗೊಂಡು ಅಖಾಡದಲ್ಲಿ ಸೆಣೆಸಾಡಿದರು.