ನನ್ನ ಹೇಳಿಕೆ ತಿರುಚಿ, ಅಪಪ್ರಚಾರದಲ್ಲಿ ತೊಡಗಿದ್ದಾರೆ: ಶಾಸಕ ಸಂಗಮೇಶ್ವರ್ನಾನು ಸರ್ವಧರ್ಮಗಳನ್ನು ಪ್ರೀತಿಸುವ ವ್ಯಕ್ತಿ. ಕ್ಷೇತ್ರದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಹಲವಾರು ವರ್ಷಗಳಿಂದ ಎಲ್ಲಾ ಧರ್ಮದ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಸೋಮವಾರ ನಗರದಲ್ಲಿ ನಡೆದ ಈದ್ ಮೆರವಣಿಗೆ ಸಂದರ್ಭದಲ್ಲಿ ನಾನು ಮಾತನಾಡಿರುವುದನ್ನು ಪೂರ್ಣವಾಗಿ ಪ್ರಸಾರ ಮಾಡದೆ ಕೆಲವರು ಅದನ್ನು ತಿರುಚಿ ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಪಷ್ಟಪಡಿಸಿದ್ದಾರೆ.