ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕು: ಜಿಲ್ಲಾಧಿಕಾರಿರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇದರಂತೆ, ಶಿವಮೊಗ್ಗ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.