ಮಧು ಸಚಿವರಾಗಿ ವರ್ಷವಾದ್ರೂ ಬಿಡಿಗಾಸು ಅನುದಾನ ತಂದಿಲ್ಲ: ಪ್ರಕಾಶ್ಈಗಾಗಲೇ ಮಳೆಗಾಲ ಆರಂಭವಾಗಿದ್ದು, ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ್ದರಿಂದ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರೀ ಚುನಾವಣೆಗಷ್ಟೇ ಸೀಮಿತವಾಗಿರುವ ಸಚಿವರು ವರ್ಷ ಕಳೆದರೂ ಒಂದು ಕೆಡಿಪಿ ಮತ್ತು ಅಧಿಕಾರಿಗಳ ಸಭೆಗೆ ಭಾಗವಹಿಸಿಲ್ಲ. ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯ.