ಪೋಡಿಮುಕ್ತ ಗ್ರಾಮ ಯೋಜನೆಗೆ ವೇಗತಾಲೂಕಿನಾದ್ಯಂತ ಸುಮಾರು ೮೦೦ ಪೋಡಿ ಖಾತೆ ಪ್ರಕರಣಗಳನ್ನು ಗುರುತಿಸಲಾಗಿದ್ದು, ಕೇವಲ ೬ ತಿಂಗಳಲ್ಲಿ ಈ ಪೈಕಿ ಸುಮಾರು ೩೦೦ಕ್ಕೂ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿ ಪೋಡಿಮುಕ್ತ ಗ್ರಾಮಗಳಾಗಿ ಘೋಷಿಸಲಾಗಿದೆ. ಈ ಮೂಲಕ ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರ ಮಹತ್ವಾಕಾಂಕ್ಷೆ ಯೋಜನೆಗಳಿಗೆ ತಾಲೂಕಿನಲ್ಲಿ ವೇಗ ನೀಡಲಾಗಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದರು.