ಮಾರಿಕಾಂಬ ಜಾತ್ರೆಗೆ ಸಿದ್ಧಗೊಳ್ಳುತ್ತಿರುವ ಶಿವಮೊಗ್ಗ ನಗರಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಹಬ್ಬದ ಸಿದ್ಧತೆ ಭರದಿಂದ ಸಾಗಿವೆ. ಈಗಾಗಲೇ ನಗರದಲ್ಲಿ ಜಾತ್ರೆ ಕಟೌಟ್‌ಗಳು, ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದು, ದೀಪಾಲಂಕಾರದಿಂದ ನಗರ ಕಂಗೊಳಿಸುತ್ತಿದೆ. ಈ ಬಾರಿ ಹಬ್ಬದ ಸಂಭ್ರಮ ಹೆಚ್ಚಿಸಲು ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಅವರು ಹೂವಿನ ಅಲಂಕಾರದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗಲೇ ಅಲಂಕಾರ ಮಾಡಲೆಂದೇ ಬೆಂಗಳೂರಿನಿಂದ ಸುಮಾರು 40ಕ್ಕೂ ಅಧಿಕ ಮಂದಿ ಆಗಮಿಸಿದ್ದಾರೆ.