ಭದ್ರಾವತಿ: ಈಶ್ವರ ದೇಗುಲಗಳಲ್ಲಿ ಶಿವರಾತ್ರಿ ವಿಜೃಂಭಣೆ ಪೂಜೆಮಹಾಶಿವರಾತ್ರಿ ಅಂಗವಾಗಿ ನಗರದ ಈಶ್ವರ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಅಲಂಕಾರ, ಪೂಜೆ, ಹೋಮ-ಹವನ ಸೇರಿದಂತೆ ಧಾರ್ಮಿಕ ಆಚರಣೆಗಳು ವಿಜೃಂಭಣೆಯಿಂದ ಜರುಗಿದವು. ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಯ ಸಂಗಮೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.