ಮಾ.5ರಂದು ಶಕ್ತಿಸಾಗರ ಸಂಗಮ ಕಾರ್ಯಕ್ರಮ, ಯಡಿಯೂರಪ್ಪರಿಗೆ ಸನ್ಮಾನಈಡಿಗ, ಬಿಲ್ಲವ, ನಾಮದಾರಿ, ದೀವರು ಮುಂತಾದ 26 ಪಂಗಡಗಳ ವತಿಯಿಂದ ಮಾ.5ರಂದು ಸಾಗರದ ಮಾರ್ಕೆಟ್ ಮೈದಾನದಲ್ಲಿ ಶಕ್ತಿ ಸಾಗರ ಸಂಗಮ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುವುದು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಸಮಾಜಗಳಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯವಾಗಿ ಈಡಿಗ ಸಮಾಜದಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ, ಮಾಜಿ ಶಾಸಕ ಹರತಾಳು ಹಾಲಪ್ಪ ಸಾಗರದಲ್ಲಿ ಹೇಳಿದ್ದಾರೆ.