ವಿರೋಧ ಮಧ್ಯೆಯೇ ಬಹುಗ್ರಾಮ ಕುಡಿವ ನೀರು ಯೋಜನೆಗೆ ಚಾಲನೆತೀರ್ಥಹಳ್ಳಿ ತಾಲೂಕಿಗೆ ಮಂಜೂರಾಗಿರುವ ₹344 ಕೋಟಿ ಅನುದಾನದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಜನವಿರೋಧ, ಪ್ರತಿಭಟನೆ ನಡುವೆಯೂ ಸೋಮವಾರ ಪೊಲೀಸ್ ಬಿಗಿ ಬಂದೋಬಸ್ತ್‌ನೊಂದಿಗೆ ಚಾಲನೆ ನೀಡಲಾಯಿತು. ಕೋಡ್ಲು ಗ್ರಾಮದ ಸ.ನಂ. 142ರಲ್ಲಿ ಈ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಬೆಳಗ್ಗಿನ ಜಾವ ಉದ್ದೇಶಿತ ಯೋಜನಾ ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆಗಳಿಗೆ ರೈತರು ಟ್ರ್ಯಾಕ್ಟರ್, ಕಾರು, ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಲಾಗಿತ್ತು. ಬಳಿಕ ಕಾಮಗಾರಿಗೆ ಅಗತ್ಯವಾದ ಸರಕು, ವಾಹನ, ಜೆಸಿಬಿಗಳಿಗೆ ತೆರಳಲು ಅವಕಾಶ ಕಲ್ಪಿಸಿ, 70ಕ್ಕೂ ಹೆಚ್ಚು ಪೊಲೀಸ್ ಬಂದೋಬಸ್ತ್‌ನಲ್ಲಿ ಜಿಲ್ಲಾಡಳಿತ ಕಾಮಗಾರಿಗೆ ಚಾಲನೆ ನೀಡಲಾಯಿತು.