ಬಸವಣ್ಣರ ತತ್ವಾದರ್ಶ ಪಾಲನೆ ಮುಖ್ಯ: ಡಿಸಿ ಗುರುದತ್ ಹೆಗಡೆ 12ನೇ ಶತಮಾನದ ಬಸವಣ್ಣನವರ ವಚನಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಸಮಾಜದಲ್ಲಿನ ಅಸಮಾನತೆ, ಅಂಕುಡೊಂಕು ತಿದ್ದುವಂತಿದ್ದವು. ಬಸವಣ್ಣನವರು ಜಾತಿ, ಧರ್ಮ, ಲಿಂಗಬೇಧವಿಲ್ಲದೇ ಸಮಾನತೆ, ಪ್ರಜಾಪ್ರಭುತ್ವ ಕಲ್ಪನೆಯನ್ನು ಕಟ್ಟಿದವರು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ. ಅವರ ತತ್ವ- ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.