ವ್ಯಕ್ತಿ, ಜಾತಿ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ ವ್ಯಕ್ತಿವಾದ, ಜಾತಿವಾದ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವ ನಾವು ಚುನಾವಣೆಯಲ್ಲಿ ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ, ಇಂದು ಹಣ, ಹೆಂಡ, ಜಾತಿ, ಧರ್ಮದ ಆಧಾರದ ಮೇಲೆ ಚುನಾವಣೆ ನಡೆಯುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಸಂವಾದ ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.