ಜಗತ್ತಿಗೇ ಕಾಯಕದ ಮಹತ್ವ ಸಾರಿದ ಶರಣರು ಇಡೀ ಜಗತ್ತಿಗೆ ಕಾಯಕದ ಮಹತ್ವ ಮತ್ತು ಸದ್ವಿಚಾರಗಳನ್ನು ಸಾರಿದ ಶಕ್ತಿಗಳೆಂದರೆ ಅದು ನಮ್ಮ ಕಾಯಕ ಶರಣರು. ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದಾರ ದೂಳಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿ ಇವರೆಲ್ಲ ವೈಚಾರಿಕ ನೆಲಗಟ್ಟಿಗೆ ಸಂಬಂಧಿಸಿದ ಕಾಯಕ ಶರಣರು. ಇವರು ತಮ್ಮ ಕಾಯಕನಿಷ್ಠೆಯಿಂದ ಸಮಾಜಕ್ಕೆ ಶಕ್ತಿ ತುಂಬಿದ್ದಾರೆ. ಸಮಾನತೆಯನ್ನು ಸಾರಿದ್ದಾರೆ ಎಂದು ಶಿವಮೊಗ್ಗ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಬಣ್ಣಿಸಿದ್ದಾರೆ.