ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ₹13.16 ಲಕ್ಷ ಮೌಲ್ಯದ 34 ಕೆ.ಜಿ. ತೂಕದ ಗಾಂಜಾವನ್ನು ಶುಕ್ರವಾರ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದ ಶುಶ್ರತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಸೊಸೈಟಿಯಲ್ಲಿ ನಾಶ ಪಡಿಸಲಾಯಿತು.
ಕೇಂದ್ರದಲ್ಲಿ ಮೋದಿ ಸರ್ಕಾರ ಪಾರದರ್ಶಕ ಆಡಳಿತ ನೀಡಿದ್ದು, ಇದೇ ಮೊದಲ ಬಾರಿಗೆ 10 ವರ್ಷಗಳ ಶ್ವೇತ ಪತ್ರವನ್ನು ಸದನದಲ್ಲಿ ಮಂಡಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಹುಳುಕನ್ನು ಹುಡುಕುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕಾಂಗ್ರೆಸ್ ನೊಂದವರಿಗೆ ಆಧಾರ ಕಲ್ಪಿಸುವ ಪಕ್ಷವಾಗಿದ್ದು, ಈ ನೆಲೆಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ನೊಂದವರ ಬದುಕಿನಲ್ಲಿ ನಗು ಮೂಡಿಸುವ ಕೆಲಸವಾಗಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಶಿಕಾರಿಪುರ ತಾಲೂಕಿನ ಬಹುತೇಕ ಅಧಿಕಾರಿಗಳು ಖಾಸಗಿ ಕಚೇರಿ ಮೂಲಕ ಪಟ್ಟಣದಲ್ಲಿ ದಂಧೆಯಲ್ಲಿ ತೊಡಗಿದ್ದ ಬಗ್ಗೆ ಶಕ್ತಿ ಸಂಗ್ರಾಮ ವೇದಿಕೆ, ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಸೂಕ್ತ ಸ್ಪಂದನೆ ದೊರೆತಿದೆ.
ದೇಶ ವಿಭಜನೆ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರ ಪಾಪದ ಕೊಡ ತುಂಬುತ್ತಿದೆ ಎಂದು ಸಂಸದ ಬಿ.ವೈ.ರಾಘವೆಂದ್ರ ಕಿಡಿಕಾರಿದರು.
ದೇಶ ವಿಭಜನೆ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕನ್ನಡ ಭಾಷೆಯ ಎದುರು ಅನ್ಯರು ಬಿರುಗಾಳಿಯಂತೆ ಎದುರು ಬಂದರೂ ಬೆಚ್ಚಿ ಬೆದರದೇ ಅಚ್ಚ ಹಸಿರಾಗಿ ಉಳಿದಿರುವುದಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವೇ ಸಾಕ್ಷಿ ಎಂದು ಸಮಾಜ ಚಿಂತಕ, ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಟಿ. ರಾಜಪ್ಪ ಮಾಸ್ತರ್ ಹೇಳಿದರು.
ಪೊಲೀಸ್ ಪೇದೆ ಹುದ್ದೆಗಾಗಿ ನಡೆಯುತ್ತಿರುವ ಪರೀಕ್ಷೆಯ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಫೆ.10ರಿಂದ ಸತತ 3 ದಿನಗಳ ಕಾಲ ಆಯೋಜಿಸಲಾಗಿದೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜವನ್ನು ತೆರವುಗೊಳಿಸಿರುವ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗದಳ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಎದುರು ಹನುಮಾನ್ ಚಾಲಿಸ್ ಪಠಣ ಮಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಫೆ.12ರಿಂದ ಆರಂಭವಾಗುವ ಸಚಿವ ಸಂಪುಟ ಸಭೆಯಲ್ಲಿ ಕೆಎಫ್ಡಿಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.