ಮೊದಲ ಪ್ರಾಶಸ್ತ್ಯದಲ್ಲೇ ಗೆದ್ದ ಬಿಜೆಪಿಯ ಡಾ.ಧನಂಜಯ ಸರ್ಜಿನೈಋತ್ಯ ಪದವೀಧರ ಕ್ಷೇತ್ರದಲ್ಲಿ 85 ಸಾವಿರ ಮತ ನೋಂದಣಿಯಾಗಿತ್ತು. ಚುನಾವಣೆಯಲ್ಲಿ 66,497 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಡಾ.ಧನಂಜಯ ಸರ್ಜಿಗೆ 37,627 ಮತ ಲಭಿಸಿದರೆ, ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ನ ಆಯನೂರು ಮಂಜುನಾಥ್ 13,516 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಪಿ.ದಿನೇಶ್ 2515 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039 ಮತ ಲಭಿಸಿದೆ.