ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ಮೇಲೆ ಹದ್ದಿನ ಕಣ್ಣಿಡಿಪ್ರಮುಖ ಗಣೇಶ ಮೂರ್ತಿಗಳು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಬಂದೋಬಸ್ತ್ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಅಧಿಕಾರಿಗಳು, ಅತ್ಯಂತ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ರಾಜ್ಯ ಪೊಲೀಸ್ ಇಲಾಖೆ ಕಾನೂನು -ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸೂಚಿಸಿದರು.